ಸ್ಮೃತಿ ಇರಾನಿ ಪುತ್ರಿ ವಿರುದ್ಧ ಅಕ್ರಮ ಬಾರ್ ಆರೋಪ: ಮೂವರು ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ ನಿಂದ ಸಮನ್ಸ್

Prasthutha|

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿಯ ವಿರುದ್ಧ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿರುವುದಾಗಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ,  ಮೂವರು ಕಾಂಗ್ರೆಸ್ ನಾಯಕರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

- Advertisement -

ತಮ್ಮ ಮಗಳ ವಿರುದ್ಧ ಅಕ್ರಮ ಆರೋಪ ಕೇಳಿ ಕೆರಳಿದ್ದ ಸಚಿವೆ, ಎಲ್ಲರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಲ್ಲದೇ  ದೆಹಲಿ ಹೈಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ ಡಿಸೋಜಾ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ಸ್ಮೃತಿ ಇರಾನಿ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ವಿರೋಧ ಪಕ್ಷದ ಪವನ್ ಖೇರಾ, ಜೈರಾಮ್ ರಮೇಶ್ ಮತ್ತು ನೆಟ್ಟಾ ಡಿಸೋಜಾ ಅವರು ತಾವು ಮಾಡಿರುವ ಟ್ವೀಟ್‌ ಗಳನ್ನು ಅಳಿಸಿ ಆಗಸ್ಟ್ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

- Advertisement -

ಒಂದು ವೇಳೆ ಟ್ವೀಟ್ ಗಳನ್ನು ಅಳಿಸಿಹಾಕುವಲ್ಲಿ ಈ ಮೂವರು ನಾಯಕರು ವಿಫಲರಾದರೆ, ಸಾಮಾಜಿಕ ಮಾಧ್ಯಮ ಕಂಪನಿ ಅಥವಾ ಟ್ವಿಟರ್ ಸ್ವತಃ ಟ್ವೀಟ್ ಗಳನ್ನು ತೆಗೆಯಬೇಕಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

Join Whatsapp