ಪ್ರಧಾನಿ ಮೋದಿ ಭೇಟಿಯಾದ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ: ಟಿಕೆಟ್ ಹಂಚಿಕೆ ಚರ್ಚೆ

Prasthutha|

ನವದೆಹಲಿ: ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಹಾಗೂ ಶಾಸಕ ಹೆಚ್ಡಿ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು.

- Advertisement -

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ.

‘ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ. ಜತೆಗೆ, ಹೆಚ್ ಡಿ ಕುಮಾರಸ್ವಾಮಿ, ಹೆಚ್ಡಿ ರೇವಣ್ಣ ಅವರೂ ಇದ್ದರು. ದೇಶದ ಪ್ರಗತಿಗೆ ದೇವೇಗೌಡರ ಅನುಸರಣೀಯ ಕೊಡುಗೆಯನ್ನು ಭಾರತವು ಬಹುವಾಗಿ ಗೌರವಿಸುತ್ತದೆ. ವೈವಿಧ್ಯಮಯ ನೀತಿ ವಿಷಯಗಳ ಕುರಿತು ಅವರ ಆಲೋಚನೆಗಳು ಒಳನೋಟವುಳ್ಳವು ಮತ್ತು ಭವಿಷ್ಯದ ದೃಷ್ಟಿಕೋನ ಹೊಂದಿದವುಗಳಾಗಿವೆ’ ಎಂದು ಮೋದಿ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.



Join Whatsapp