JDS ರಾಷ್ಟ್ರೀಯ ಅಧ್ಯಕ್ಷರಾಗಿ H.D.ದೇವೇಗೌಡ ಪುನರಾಯ್ಕೆ

Prasthutha|

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನದ ಮೂಲಕ ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ಪುನರಾಯ್ಕೆಯಾಗಿದ್ದಾರೆ.

- Advertisement -

ಕೇರಳದ ಮಾಜಿ ಸಚಿವರು, ಹಾಲಿ ಶಾಸಕರು ಸೇರಿ ವಿವಿಧ 13 ರಾಜ್ಯಗಳ ಪ್ರತಿನಿಧಿಗಳು ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಿದ್ದು, ದೇವೇಗೌಡರೇ ರಾಷ್ಟ್ರೀಯ ಅಧ್ಯಕ್ಷ ಆಗಬೇಕು ಎಂದು ಎಲ್ಲ ರಾಜ್ಯ ಪ್ರತಿನಿಧಿಗಳ ಒಮ್ಮತ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲು ಕಾರ್ಯಕಾರಿಣಿಯಲ್ಲಿ ತೀರ್ಮಾನಿಸಲಾಗಿದೆ.

ಸಭೆಯಲ್ಲಿ, ಪಕ್ಷವು ಬೆಲೆ ಏರಿಕೆ, ಕೃಷಿ, ರೈತರ ಸಮಸ್ಯೆಗಳು, ದಲಿತರು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಕೆಲವು ನಿರ್ಣಯಗಳನ್ನು ಅಂಗೀಕರಿಸಲಿದೆ, ಕೋಮು ಸೌಹಾರ್ದತೆ ಮತ್ತು ದೇಶದ ಆರ್ಥಿಕತೆಯ ಸ್ಥಿತಿಯ ಬಗ್ಗೆ ಪ್ರಮುಖ ನಿರ್ಣಯವನ್ನು ಸಹ ಅಂಗೀಕರಿಸಲಾಗಿದ್ದು, ಮುಂಬರುವ 2023 ರ ಕರ್ನಾಟಕ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜೆಡಿಎಸ್ ಅಂತಿಮಗೊಳಿಸಲಿದೆ. ನವೆಂಬರ್ 1 ರಂದು ಕೋಲಾರದ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಹೆಸರುಗಳನ್ನು ಘೋಷಿಸಲಾಗುವುದು ಎಂದು ತಿಳಿದು ಬಂದಿದೆ.

Join Whatsapp