ನಾಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರು ಪ್ರವಾಸ

Prasthutha|

►ಮೊಯ್ದಿನ್ ಬಾವಾ ಪರ ಚುನಾವಣಾ ಪ್ರಚಾರ

- Advertisement -

ಮಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ನಾಳೆ (ಮೇ 1) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿರುವ ದೇವೇಗೌಡ, ಸುರತ್ಕಲ್ ನಲ್ಲಿ 2.30 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೇ 1 ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸನ್ಮಾನ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

- Advertisement -

ಮೇ.5ಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೃಷ್ಣಾಪುರಕ್ಕೆ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೇ 5ರಂದು ಕೃಷ್ಣಾಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಫಾರೂಕ್ ಅವರು ತಿಳಿಸಿದ್ದಾರೆ.

Join Whatsapp