ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಹೆಚ್ ಡಿ ಕುಮಾರಸ್ವಾಮಿ ಕೈವಾಡ: ಡಿಕೆ ಸುರೇಶ್

Prasthutha|

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಡಿಯೋ ಬಿಡುಗಡೆ ಹಿಂದೆ ಮೈತ್ರಿ ನಾಯಕರು ಹಾಗೂ ಹೆಚ್ ಡಿ ಕುಮಾರಸ್ವಾಮಿ ಕೈವಾಡ ಇದೆ. ಹೆಣ್ಣು ಮಕ್ಕಳಿಗೆ ಅನ್ಯಾಯ ಆಗಿರುವ ಬಗ್ಗೆ ಗಮನ ಹರಿಸಬೇಕಿದೆ. ಈ ಕೇಸ್ ಬಗ್ಗೆ ಹಾಸನ ಜಿಲ್ಲೆಯಲ್ಲಿ ಮೊದಲೇ ಗುಸುಗುಸು ಇತ್ತು. ಹಾಗೆಂದು ವೀಡಿಯೋ ನೋಡಿದವರು ಯಾರೂ ಇರಲಿಲ್ಲ. ನ್ಯಾಯಾಲಯದ ತಡೆಯಾಜ್ಞೆ ತಂದಾಗ ಅದು ಖಚಿತ ಆಗಿದೆ. ಪೆನ್ ಡ್ರೈವ್ ಬಿಡುಗಡೆಯಾದಾಗ ಬಹಿರಂಗವಾಗಿ ಚರ್ಚೆ ಆಗಿದೆ. ಈ ವಿಡಿಯೋ ಹಿಂದೆ ಹಾಸನ ಜಿಲ್ಲಾ ನಾಯಕರ ಕೈವಾಡ ಇದೆ ಎಂದರು.



Join Whatsapp