ಆಸ್ಪತ್ರೆಯಿಂದಲೇ ಕಾವೇರಿ ನದಿ ಹೋರಾಟಕ್ಕೆ ಕರೆ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

Prasthutha|

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ನದಿ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ.

- Advertisement -

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಮಂಡ್ಯ, ರಾಮನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.

ಇನ್ನು ನಾಳೆ ಸಂಜೆ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದು, ಇವರ ಆರೋಗ್ಯ ವಿಚಾರಿಸಲೆಂದು ಆಸ್ಪತ್ರೆಗೆ ತೆರಳಿದ್ದ ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಅವರಿಗೆ ಜೆಡಿಎಸ್​​ನಿಂದ ಕಾವೇರಿ ಹೋರಾಟ ಆರಂಭಿಸವಂತೆ ಹೇಳಿದ್ದಾರೆ ಎಂದು ತಿಳಿದು‌ ಬಂದಿದೆ.

Join Whatsapp