Home ಟಾಪ್ ಸುದ್ದಿಗಳು ಆಸ್ಪತ್ರೆಯಿಂದಲೇ ಕಾವೇರಿ ನದಿ ಹೋರಾಟಕ್ಕೆ ಕರೆ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಆಸ್ಪತ್ರೆಯಿಂದಲೇ ಕಾವೇರಿ ನದಿ ಹೋರಾಟಕ್ಕೆ ಕರೆ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ನದಿ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಮಂಡ್ಯ, ರಾಮನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.

ಇನ್ನು ನಾಳೆ ಸಂಜೆ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದು, ಇವರ ಆರೋಗ್ಯ ವಿಚಾರಿಸಲೆಂದು ಆಸ್ಪತ್ರೆಗೆ ತೆರಳಿದ್ದ ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಅವರಿಗೆ ಜೆಡಿಎಸ್​​ನಿಂದ ಕಾವೇರಿ ಹೋರಾಟ ಆರಂಭಿಸವಂತೆ ಹೇಳಿದ್ದಾರೆ ಎಂದು ತಿಳಿದು‌ ಬಂದಿದೆ.

Join Whatsapp
Exit mobile version