ದುಬೈಗೆ ತೆರಳಿದ ಹೆಚ್ ಡಿ ಕುಮಾರಸ್ವಾಮಿ

Prasthutha|

ದೇವನಹಳ್ಳಿ (ಬೆಂಗಳೂರು) : ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದರು. ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿಯವರೂ ಜೊತೆಯಲ್ಲಿ ದುಬೈಗೆ ತೆರಳಿದರು.

- Advertisement -


ದುಬೈಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಬೈನಲ್ಲಿ ಕೆಂಪೇಗೌಡರ ಸಂಘದ ಸಭೆ ಇದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದೇನೆ. ಬೇರೇನೂ ವಿಷಯ ಇಲ್ಲ ಎಂದು ಹೇಳಿದರು.



Join Whatsapp