Home ಟಾಪ್ ಸುದ್ದಿಗಳು ಹೈದರಾಬಾದ್‌ʼನಲ್ಲಿ ತೆಲಂಗಾಣ ಸಚಿವ ಕೆಟಿಆರ್‌ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ

ಹೈದರಾಬಾದ್‌ʼನಲ್ಲಿ ತೆಲಂಗಾಣ ಸಚಿವ ಕೆಟಿಆರ್‌ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ

ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಇಂದಿಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು.

ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು.

ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ಮುನ್ನ ಕುಮಾರಸ್ವಾಮಿ ಅವರು ಸಚಿವರು ಮತ್ತು ಚಂದ್ರಶೇಖರ್‌ ರಾವ್‌ ಅವರ ಪುತ್ರರೂ ಆಗಿರುವ ಕೆಟಿಆರ್‌ ಅವರೊಂದಿಗೆ ಚರ್ಚೆ ನಡೆಸಿದರು.

Join Whatsapp
Exit mobile version