Home ಟಾಪ್ ಸುದ್ದಿಗಳು ಜೆಡಿಎಸ್ ಮುಸ್ಲಿಂ ಸಮಾಜವನ್ನೇ ನಂಬಿಕೊಂಡು ಕುಳಿತಿಲ್ಲ ಎಂದ ಹೆಚ್​ಡಿ ಕುಮಾರಸ್ವಾಮಿ

ಜೆಡಿಎಸ್ ಮುಸ್ಲಿಂ ಸಮಾಜವನ್ನೇ ನಂಬಿಕೊಂಡು ಕುಳಿತಿಲ್ಲ ಎಂದ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​​ನಿಂದ ಮುಸ್ಲಿಂ ಮುಖಂಡರು ದೂರ ಸರಿಯುತ್ತಿರುವ ಬಗ್ಗೆ ಪಕ್ಷದ ನಾಯಕ ಹೆಚ್​​ಡಿ ಕುಮಾರಸ್ವಾಮಿ ತೀಕ್ಷ್ಣವಾದ ಮಾತುಗಳನ್ನಾಡಿದ್ದಾರೆ.

ಪ್ರತಿಷ್ಠಿತ ಮಾದ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮಾಜವನ್ನೇ ನಂಬಿಕೊಂಡು ಕೂತಿಲ್ಲ. ಅದೊಂದು ಸಮುದಾಯವನ್ನು ನೆಚ್ಚಿಕೊಂಡು ರಾಜಕೀಯ ಮಾಡುತ್ತಿಲ್ಲ. ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿಯಾಗಿ ನಮ್ಮ ಪಕ್ಷವಿದೆ ಎಂದು ಹೇಳಿದ್ದಾರೆ.

ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ನಂತರ ಮುಸ್ಲಿಂ ನಾಯಕರು ಪಕ್ಷದಿಂದ ದೂರ ಸರಿಯುತ್ತಿದ್ದಾರಲ್ಲ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗಿದ್ದರೆ ಅವರು 2019 ರಲ್ಲಾಗಲೀ 2023 ರಲ್ಲಾಗಲೀ ಯಾಕೆ ನಮ್ಮನ್ನು ಬೆಂಬಲಿಸಿಲ್ಲ ಎಂದು ಮರು ಪ್ರಶ್ನೆ ಹಾಕಿದರು. ಹಿಜಾಬ್ ವಿವಾದ, ಹಲಾಲ್ ಕಟ್ ವಿವಾದ ಆದಾಗ ಮುಸ್ಲಿಂ ಸಮುದಾಯದ ಬೆನ್ನಿಗೆ ನಿಂತಿದ್ದೇ ಜೆಡಿಎಸ್. ಆವಾಗ ಕಾಂಗ್ರೆಸ್ ಎಲ್ಲೋಗಿತ್ತು? ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಮಂಗಳೂರಿನಲ್ಲಿ ಗೋಲಿಬಾರ್ ಆದಾಗ ಆ ಸಮುದಾಯದ ಪರ ವಹಿಸಿದ್ದೆವು. ಆವಾಗಲೂ ಕಾಂಗ್ರೆಸ್ ಚಕಾರ ಎತ್ತಿರಲಿಲ್ಲ. ಇಷ್ಟೆಲ್ಲ ಆದರೂ ಅವರು (ಮುಸ್ಲಿಮರು) ನಮ್ಮನ್ನು ಬೆಂಬಲಿಸಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಯಾವ ಕಾರಣಕ್ಕೆ ಅವರು ಜನತಾ ದಳವನ್ನು ಬೆಂಬಲಿಸಲಿಲ್ಲ ಎಂದು ಪ್ರಶ್ನಿಸಿದರು.

ರಾಜೀನಾಮೆ ಕೊಡುವವರು ಕೊಡಲಿ ಬೇಡ ಅಂದವರು ಯಾರು; ಕುಮಾರಸ್ವಾಮಿ ಪ್ರಶ್ನೆ

ಯಾರು ಬೇಕಾದರೂ ರಾಜೀನಾಮೆ ಕೊಡಲಿ, ಅದನ್ನು ಇಟ್ಟುಕೊಳ್ಳುವವರು ಯಾರು? ಹೋಗುವವರು ಹೋಗಲಿ. ನಾನು ಯಾವುದೇ ಒಂದು ಸಮಾಜದ ಪ್ರತಿನಿಧಿಯಲ್ಲ. ನಮ್ಮ ಸಮಾಜ, ಒಕ್ಕಲಿಗ ಸಮಾಜ ನನಗೆ ಬೆಂಬಲ ಕೊಟ್ಟಿರಬಹುದು. ಹಾಗೆಂದು ನಾನು ಅದೊಂದು ಸಮಾಜದ ಪ್ರತಿನಿಧಿಯಲ್ಲ. ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿ. ರಾಜ್ಯದ ಒಳಿತಿಗಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

Join Whatsapp
Exit mobile version