ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ವಾರ್ಡ್’ಗೆ ಶಿಫ್ಟ್

Prasthutha|

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

- Advertisement -


ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಿ ನಿಗಾವಹಿಸಿದ್ದಾರೆ.

Join Whatsapp