ಜೆಡಿಎಸ್ – ಸುಮಲತಾ ನಡುವಿನ ಗುದ್ದಾಟಕ್ಕೆ ದೇವೇಗೌಡರ ಬ್ರೇಕ್ !

Prasthutha: July 9, 2021

ಬೆಂಗಳೂರು : ಮಂಡ್ಯದ ಕೆ..ಆರ್.ಎಸ್ ಡ್ಯಾಂ ಬಳಿ ಕಲ್ಲಿದ್ದಲು ಗಣಿಗಾರಿಕೆ ವಿಚಾರದಲ್ಲಿ ಜೆಡಿಎಸ್ ನಾಯಕರು ಮತ್ತು ಸಂಸದೆ ಸುಮಲತಾ ನಡುವೆ ನಡೆಯುತ್ತಿರುವ ವಾಗ್ದಾಳಿ ವೈಯಕ್ತಿಕ ಹಂತಕ್ಕೆ ತಲುಪುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಾತಿನ ಸಮರಕ್ಕೆ ಕದನ ವಿರಾಮ ಘೋಷಿಸಿದ್ದಾರೆ.

ಎರಡೂ ಬಣಗಳಿಗೆ ಸಂದೇಶ ಕಳುಹಿಸಿರುವ ಗೌಡರು, ಆರೋಪ, ಪ್ರತ್ಯಾರೋಪ ಸಾಕು ಮಾಡುವಂತೆ ತಾಕೀತು ಮಾಡಿದ್ದಾರೆ. ಎರಡು ದಿನಗಳ ಹಿಂದೆ ಬೆಳವಣಿಗೆಗಳನ್ನು ನೋಡುತ್ತಿದ್ದೇನೆ, ಈ ಬಗ್ಗೆ ಏನೂ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದ ದೇವೇಗೌಡರು ಇದೀಗ ಕದನಕ್ಕೆ ವಿರಾಮ ಹಾಕಲು ಮಧ್ಯಪ್ರವೇಶಿಸಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ನಾಯಕರು ಮಾತಿನಲ್ಲಿ ಹಿಡಿತ ಕಳೆದುಕೊಳ್ಳುತ್ತಿರುವುದನ್ನು ಗೌಡರು ಸೂ್ಕಷ್ಮವಾಗಿ ಗಮನಿಸಿದ್ದಾರೆ. ಟೀಕೆ-ಟಿಪ್ಪಣಿಗಳು ತೀವ್ರ ವೈಯಕ್ತಿಕ ಮಟ್ಟಕ್ಕೆ ಹೋದರೆ ಇದರಿಂದ ಪಕ್ಷಕ್ಕೆ ಧಕ್ಕೆಯಾಗುತ್ತದೆ, ರಾಜ್ಯದ ಜನತೆಗೆ ಬೇರೆ ಸಂದೇಶ ರವಾನೆಯಾಗುತ್ತದೆ, ಅದಕ್ಕೆ ಅವಕಾಶ ಮಾಡಿಕೊಡದಂತೆ ದೇವೇಗೌಡರು ತಮ್ಮ ಪಕ್ಷದ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುಮಲತಾ ಬಣಕ್ಕೂ ವಿವಾದಕ್ಕೆ ಇತ್ಯರ್ಥ ಹಾಡುವಂತೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ