ಎಚ್ ಡಿಕೆ ಕುಟುಂಬ ರಾಜಕೀಯದ ಕೂಪಮಂಡೂಕ: ನಳಿನ್ ಕುಮಾರ್ ಕಟೀಲ್

Prasthutha: October 6, 2021

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕುಟುಂಬ ರಾಜಕೀಯದ ಕೂಪ ಮಂಡೂಕದಂತಿದ್ದಾರೆ. ಅದರಿಂದ ಕುಟುಂಬವೆಂಬ ಕೂಪದಿಂದ ಹೊರಬಂದು ಅವರು ಮಾತನಾಡುವುದು ಉಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ದೇಶ ಶಕ್ತಿಶಾಲಿಯಾಗಬೇಕೆಂಬ ಮಹತ್ವದ ಚಿಂತನೆಯನ್ನು ಆರೆಸ್ಸೆಸ್ ಹೊಂದಿದೆ. ಭಾರತ ವಿಶ್ವಗುರುವಾಗಬೇಕು ಎಂಬ ಉದ್ದೇಶದಿಂದ ಅದು ಕಾರ್ಯನಿರ್ವಹಿಸುತ್ತಿದ್ದು, ಆರೆಸ್ಸೆಸ್ ಸ್ವಯಂಸೇವಕರು ಜೀವನವನ್ನು ಸಮರ್ಪಣೆ ಮಾಡಿಕೊಂಡು ಕೆಲಸ ಮಾಡುತ್ತಾರೆ. ವಿಶ್ವದ ದೊಡ್ಡ ಸಂಘಟನೆಯಾಗಿ ಹೊರಹೊಮ್ಮಿರುವ ಅಲ್ಲಿ ಯಾರೂ ಸ್ವಾರ್ಥಿಗಳಲ್ಲ. ಹಾಗೆಯೇ ನಾನು ನನ್ನ ಮಕ್ಕಳು, ಮರಿಮಕ್ಕಳೇ ಈ ರಾಜ್ಯ ದೇಶ ಆಳ್ವಿಕೆ ಮಾಡಬೇಕು ಎಂಬ ಸ್ವಾರ್ಥ ಅವರಲ್ಲಿಲ್ಲ ಎಂದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್ ಹಿರಿಯ ಮುಖಂಡರಾದ ಪಿ.ಜಿ.ಆರ್.ಸಿಂಧ್ಯಾ ಅವರು ಆರೆಸ್ಸೆಸ್ ಹಿನ್ನೆಲೆಯಿಂದ ಬಂದವರು. ಆರೆಸ್ಸೆಸ್ ಬಗ್ಗೆ ಅವರಿಂದ ಕುಮಾರಸ್ವಾಮಿಯವರು ಕೇಳಿ ತಿಳಿದುಕೊಳ್ಳಲಿ. ಅಥವಾ ಯಾವುದಾದರೂ ಶಾಖೆಗೆ ಬಂದು ಅಲ್ಲಿ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಅವರು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!