Home ಟಾಪ್ ಸುದ್ದಿಗಳು ಎಚ್.ಡಿ.ಕೆ ಕುಟುಂಬದ ವಂಶಪಾರಂಪರ್ಯ ರಾಜಕಾರಣ ಮುಂದಿನ ಚುನಾವಣೆಯೊಂದಿಗೆ ಅಂತ್ಯ: ಸಿ.ಪಿ. ಯೋಗೇಶ್ವರ್

ಎಚ್.ಡಿ.ಕೆ ಕುಟುಂಬದ ವಂಶಪಾರಂಪರ್ಯ ರಾಜಕಾರಣ ಮುಂದಿನ ಚುನಾವಣೆಯೊಂದಿಗೆ ಅಂತ್ಯ: ಸಿ.ಪಿ. ಯೋಗೇಶ್ವರ್

ರಾಮನಗರ: ಎಚ್.ಡಿ.ಕುಮಾರಸ್ವಾಮಿ ಕುಟುಂಬದ ವಂಶಪಾರಂಪರ್ಯ ರಾಜಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಜನತೆ ಅಂತ್ಯ ಹಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.


ರಾಮನಗರ ವಿಧಾನಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಘೋಷಿಸಿರುವ ಬೆನ್ನಲ್ಲೇ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ 1,500 ಕೋಟಿ ರೂ. ಅನುದಾನ ತಂದಿರುವುದಾಗಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದು, ಈ ಎಲ್ಲ ಕಾಮಗಾರಿಯನ್ನು ಬೇನಾಮಿ ಹೆಸರಿನಲ್ಲಿ ತಾವೇ ನಡೆಸಿದ್ದಾರೆ. ಗುತ್ತಿಗೆದಾರರಿಂದ ದಂಧೆ ನಡೆಸಿ, ಆ ಪಾಪದ ಹಣವನ್ನು ಹೆಲಿಕಾಪ್ಟರ್ ನಲ್ಲಿ ಹೂವಿನ ರೂಪದಲ್ಲಿ ಚೆಲ್ಲಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.


ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ವಿಚಾರದಲ್ಲಿ ಜೆಡಿಎಸ್ ಜನರ ದಿಕ್ಕು ತಪ್ಪಿಸುತ್ತಿದೆ. ಕಳೆದ ಬಾರಿಯೂ ಇವರ ಮಾತು ನಂಬಿಕೊಂಡು ಜನರ ಆಸ್ತಿ ಹರಾಜಾಯಿತು ಎಂದು ಟೀಕಿಸಿದರು.

Join Whatsapp
Exit mobile version