ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ: ಕುಮಾರಸ್ವಾಮಿ

Prasthutha|

- Advertisement -

ಬೆಂಗಳೂರು: ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಶಾಲಾ ವಿದ್ಯಾರ್ಥಿಗಳು ಬಸ್ ಹತ್ತಲಾಗದೆ ಪರದಾಡುತ್ತಿರುವ ಮತ್ತು ಮಕ್ಕಳು ಹತ್ತುತ್ತಿಂದತೆಯೇ ಬಸ್ ಮುಂದಕ್ಕೆ ಚಲಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹಂಚಿಕೊಂಡಿರುವ ಅವರು, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆಂದು ಹೊರಟ ಕಾಂಗ್ರೆಸ್ ಪಕ್ಷದ ಸರ್ಕಾರ ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

Join Whatsapp