ಬೆಂಗಳೂರು: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿ ಬಂದಿತ್ತು.ಈ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಹೆಚ್ಡಿ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದರು. ಆದರೆ, ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಶ್ರೀನಿವಾಸಪುರ ಭೇಟಿ ರದ್ದಾಗಿದೆ.