Home ಟಾಪ್ ಸುದ್ದಿಗಳು ಮಾಜಿ ಸಿಎಂ ಹೆಚ್.​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಹೆಚ್.​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೆಚ್​.ಡಿ ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿ ಬಂದಿತ್ತು.ಈ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಹೆಚ್​ಡಿ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದರು. ಆದರೆ, ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಶ್ರೀನಿವಾಸಪುರ ಭೇಟಿ ರದ್ದಾಗಿದೆ.

Join Whatsapp
Exit mobile version