ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ: ಇಬ್ರಾಹಿಂ ಹೇಳಿಕೆಗೆ ಕುಮಾರಸ್ವಾಮಿ ಟಾಂಗ್

Prasthutha|

- Advertisement -

ಬೆಂಗಳೂರು:
ನಮ್ಮದೇ ಒರಿಜಿನಲ್ ಜೆಡಿಎಸ್ ಬಿಜೆಪಿಗೆ ಬೆಂಬಲ ಇಲ್ಲ ಎಂದಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಮಗೆ ಅದು ದೊಡ್ಡದಾಗಿ ಕಾಣುತ್ತಿದೆ. ಏನು ಸರಿ ಮಾಡಬೇಕೋ ಅದನ್ನು ನಾವು ಮಾಡುತ್ತೇವೆ. ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರೇ ಒರಿಜಿನಲ್ ಎಂದು ಬರೆದುಕೊಳ್ಳಲಿ ಎಂದು ಟಾಂಗ್ ಕೊಟ್ಟರು.

- Advertisement -

ಕುಮಾರಸ್ವಾಮಿ ಹಾಗೂ ನಿಖಿಲ್ ಪಕ್ಷದಿಂದ ಉಚ್ಚಾಟನೆ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಅವರಿಗೆ ಬಿಟ್ಟಿದ್ದು. ದಯವಿಟ್ಟು ಇಂತಾ ಸಿಲ್ಲಿ ವಿಚಾರಕ್ಕೆ ಬರಬೇಡಿ. ನಮಗೆ ಏನು ಮಾಡಬೇಕೊ, ಸರಿ ಮಾಡುತ್ತೇವೆ. ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ? ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ. ನಮ್ಮ ಪಕ್ಷದಲ್ಲಿ ಇರುವ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನೀವು ಯಾಕೆ ವರಿ ಮಾಡಿಕೊಳ್ಳುತ್ತೀರಿ ಎಂದರು.

Join Whatsapp