ಕಿಂಗ್‌ ಮೇಕರ್ ಕನಸು ಭಗ್ನಗೊಂಡ ಹೆಚ್‌ಡಿಕೆ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ: ದಿನೇಶ್‌ ಗುಂಡೂರಾವ್‌

Prasthutha|

ಬೆಂಗಳೂರು: ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದ ಎಚ್ ಡಿ ಕುಮಾರಸ್ವಾಮಿ ಅವರ ಕನಸು ನುಚ್ಚು ನೂರಾಗಿ ಭಗ್ನಗೊಂಡ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್‌ ಟಾಂಗ್‌ ನೀಡಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌.ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ ಎಂದು ತಿರುಗೇಟು ನೀಡಿದ್ದಾರೆ.

ಹೆಚ್‌ ಡಿಕೆಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು ಎಂದಿದ್ದಾರೆ

Join Whatsapp