ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಪೊಲೀಸ್ ದೂರು ನೀಡಿದ ಸಿಎಂ ಇಬ್ರಾಹಿಂ

Prasthutha|

ಬೆಂಗಳೂರು: ಹೆಚ್​​ಡಿ ಕುಮಾರಸ್ವಾಮಿ ಮತ್ತು ಅವರ ಮಗ ನಿಖಿಲ್ ರವರನ್ನು ಸಿಎಂ ಉಚ್ಚಾಟನೆ ಮಾಡಿದ್ದಾರೆಂದು ಪತ್ರವೊಂದು ವೈರಲ್ ಆಗುತ್ತಿದೆ. ಇದು ನಕಲಿ ಎಂದಿರುವ ಸಿಎಂ ಇಬ್ರಾಹಿಂ, ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸರಿಗೆ ಮನವಿ ನೀಡಿದ್ದಾರೆ. ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಎನ್​ಡಿಎ ಜತೆ ಮೈತ್ರಿ ಘೋಷಣೆ ಮಾಡಿರುವುದಕ್ಕೆ ಇಬ್ರಾಹಿಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.