Home ಟಾಪ್ ಸುದ್ದಿಗಳು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಅಶ್ವಿನಿ ವೈಷ್ಣವ್ ಜೊತೆಗೆ ಹೆಚ್‌’ಡಿಕೆ ಚರ್ಚೆ

ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಅಶ್ವಿನಿ ವೈಷ್ಣವ್ ಜೊತೆಗೆ ಹೆಚ್‌’ಡಿಕೆ ಚರ್ಚೆ

ನವದೆಹಲಿ: ರಾಜ್ಯದ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಹೆಚ್‌ ಡಿಕೆ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಹೆಚ್‌ ಡಿಕೆ ಸುದೀರ್ಘ ಸಮಾಲೋಚನೆ ನಡೆಸಿದರು. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು-ಸತ್ಯಮಂಗಲ-ಚಾಮರಾಜನಗರ (ಕನಕಪುರ-ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಮನವಿ ಮಾಡಿದರು.

Join Whatsapp
Exit mobile version