ದೆಹಲಿಗೆ ತೆರಳಿ ಅಮಿತ್ ಶಾ ಜೊತೆ ಚರ್ಚಿಸಿದ HDK

Prasthutha|

ನವದೆಹಲಿ: ರಾಷ್ಟ್ರ ರಾಜಧಾನಿಗೆ ತೆರಳಿರುವ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ನಿನ್ನೆ ಸಂಜೆ ಕೇಂದ್ರ ಗೃಹಸಚಿವ ಅಮಿತ್‌ ಶಾ ಜತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.

- Advertisement -

ಗಅಮಿತ್‌ ಶಾ ನಿವಾಸದಲ್ಲಿ ನಡೆದ ಮಾತುಕತೆಯಲ್ಲಿ ಕುಮಾರಸ್ವಾಮಿ ಮಗ ನಿಖೀಲ್‌ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಭಾಗಿಯಾಗಿದ್ದರು. 45 ನಿಮಿಷಕ್ಕೂ ಹೆಚ್ಚು ಮಾತುಕತೆ ನಡೆದಿದೆ.

45 ನಿಮಿಷ ಕಾಲ ನಡೆದ ಈ ಸಭೆಯಲ್ಲಿ ಗೃಹ ಸಚಿವರ ಜತೆ ಎಲ್ಲ ವಿಷಯಗಳನ್ನು ಮುಕ್ತವಾಗಿ ಚರ್ಚಿಸಿದ್ದೇನೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದು ಮತ್ತೂಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಈ ಬಗ್ಗೆ ಜೆಡಿಎಸ್‌ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದು ಕುಮಾರ ಸ್ವಾಮಿ ಹೇಳಿದ್ದಾರೆ.

- Advertisement -

ಕ್ಷೇತ್ರ ಹಂಚಿಕೆ ಸಹಿತ ಜೆಡಿಎಸ್‌ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳೆಲ್ಲವನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜತೆ ಕೂತು ಚರ್ಚೆ ನಡೆಸಿದ ಬಳಿಕ ಅಂತಿಮಗೊಳಿಸೋಣ ಎಂದು ಶಾ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್‌ಡಿಎ ಮೈತ್ರಿಕೂಟ ಗೆದ್ದು ಮತ್ತೂಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್‌ ಎರಡೂ ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲ ನಿರ್ಧಾರಗಳನ್ನು ಮಾಡೋಣ ಎಂದು ಕುಮಾರಸ್ವಾಮಿಗೆ ಅಮಿತ್ ಶಾ ತಿಳಿಸಿದ್ದಾರೆ ಎನ್ನಲಾಗಿದೆ.

Join Whatsapp
Exit mobile version