ಕೃಷಿ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕರ ಕೊಡುಗೆಯಾದರೂ ಏನು?: ಹೆಚ್ ಡಿ ಕುಮಾರಸ್ವಾಮಿ

Prasthutha|

- Advertisement -

ಬೆಂಗಳೂರು: ಕೃಷಿ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕರ ಕೊಡುಗೆ ಏನು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಚುನಾಯಿತನಾದರೆ ಎನ್ ಡಿಎ ಸರ್ಕಾರದಲ್ಲಿ ಕೃಷಿ ಸಚಿವನಾಗುವೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿಕೊಂಡಿದ್ದಕ್ಕೆ ಕಾಂಗ್ರೆಸ್ ನಾಯಕರು ಗೇಲಿ ಮಾಡಿದ್ದು, ಈ ಬಗ್ಗೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಮಹಾದಾಯಿ ಯೋಜನೆಯನ್ನು ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ಕೊಟ್ಟಿದ್ದು, ತುಂಗಭದ್ರ ಮೇಲ್ದಂಡೆ ಯೋಜನೆ ಶುರುಮಾಡಿದ್ದ್ದು ತಾನು ಮತ್ತು ಬಿಎಸ್ ಯಡಿಯೂರಪ್ಪ ಎಂದು ಹೇಳಿದ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರು ಕೃಷಿ ಮತ್ತು ಕೃಷಿಕರ ಬಗ್ಗೆ ಹಗುರವಾಗಿ ಮಾತಾಡುವುದನ್ನು ನಿಲ್ಲಿಸಬೇಕು ಎಂದರು.



Join Whatsapp