ಬೆಂಗಳೂರು: ಬಂಟ್ವಾಳದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭಾಷಣ, ಕಲ್ಪಡ್ಕ ಭಟ್ಟರನ್ನು ಹೊಗಳಿದ್ದು ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಹೊಸ ಅಸ್ತ್ರ ನೀಡಿದಂತಾಗಿದೆ.
ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ಮಾಡಿದ ಕಾಂಗ್ರೆಸ್, ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು RSS ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ ಎಂದಿದೆ.
Xನಲ್ಲಿ ಈ ಕುರಿತು ಬರೆದಿರುವ ಕಾಂಗ್ರೆಸ್, ಕುಮಾರಸ್ವಾಮಿ ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ. ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ. ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ ಎಂದು ಹೇಳಿದೆ. ಅಲ್ಲದೆ, ಕ ವಿಪಕ್ಷ ನಾಯಕ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇಬ್ಬರಿಗೆ ಎಚ್ಚರಗೊಳ್ಳಲು ಎಂದು ಸಲಹೆ ನೀಡಿದೆ.