ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ: ಸುಧಾಕರ್ ವಿರುದ್ಧ ಸಿಡಿದೆದ್ದ ಎಂಬಿಟಿ ನಾಗರಾಜ್

Prasthutha|

ಬೆಂಗಳೂರು: ತಮ್ಮ ಸೋಲಿಗೆ ಮಾಜಿ ಸಚಿವ ಡಾ.ಕೆ. ಸುಧಾಕರ್ ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ನೇರವಾಗಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -


ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಕಾಂಗ್ರೆಸ್ ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ. ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.


ಡಾ.ಕೆ.ಸುಧಾಕರ್ ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ಉಸ್ತುವಾರಿ ಸ್ಥಾನವನ್ನು ಡಾ.ಕೆ.ಸುಧಾಕರ್ ಸಮರ್ಥವಾಗಿ ನಿಭಾಯಿಸಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ. ನನ್ನ ಹಾಗೂ ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ.ಕೆ.ಸುಧಾಕರ್ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಸುಧಾಕರ್ನಿಂದಾಗಿಯೇ ನಾನು ಸೋತಿದ್ದು ಎಂದು ಎಂಟಿಬಿ ನಾಗರಾಜ್ ಕಿಡಿಕಾರಿದರು.

Join Whatsapp