Home ಟಾಪ್ ಸುದ್ದಿಗಳು ಸಮವಸ್ತ್ರದಲ್ಲೇ ಸ್ವಾಮಿಯ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ವರ್ಗಾವಣೆ

ಸಮವಸ್ತ್ರದಲ್ಲೇ ಸ್ವಾಮಿಯ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ವರ್ಗಾವಣೆ

0

ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಬಾರಿ ಟೀಕೆ ವ್ಯಕ್ತವಾಗಿತ್ತು. ಹೀಗಿರುವಾಗಲೇ ವರ್ಗಾವಣೆ ಅಸ್ತ್ರ ಪ್ರಯೋಗ ಮಾಡಲಾಗಿದೆ.

ಆರು ಜನ ಕಾನ್ಸ್ಟೇಬಲ್​​ಗಳನ್ನು ವರ್ಗಾವಣೆ ಮಾಡಿ ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್​​ಐ ಜಿಬಿ ದಳವಾಯಿ ಅವರನ್ನು ಹುನಗುಂದ ಠಾಣೆಗೆ, ಡಿಜೆ ಶಿವಪುರ ಎಎಸ್​​ಐ ಬಾಗಲಕೋಟೆ ಗ್ರಾಮೀಣ ಠಾಣೆ, ನಾಗರಾಜ ಅಂಕೋಲೆ ಬೀಳಗಿ ಠಾಣೆ, ಜಿಬಿ ಅಂಗಡಿ ಇಳಕಲ್ ನಗರ ಠಾಣೆ, ರಮೇಶ್ ಈಳಗೇರ ಬಾಗಲಕೋಟೆ ಗ್ರಾಮೀಣ ಠಾಣೆ, ರಮೇಶ್ ಹುಲ್ಲೂರು ಜಿಲ್ಲಾ ಪೊಲೀಸ್ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆಯಾದ ಸಿಬ್ಬಂದಿ ಸದ್ಯ ವಾಸವಿರುವ ವಸತಿಗೃಹ ಕೂಡ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ.

ವಿಡಿಯೋ ವೈರಲ್​ ಬಳಿಕ ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಸ್ಪಷ್ಟನೆ ನೀಡಿದ್ದು, ನನಗೆ ಪೊಲೀಸರು, ರಾಜಕಾರಣಿಗಳು, ನಟರು, ಬಡವರು, ಶ್ರೀಮಂತರು ಎಲ್ಲರೂ ಒಂದೆ ಸಮಾನ. ಎಲ್ಲರೂ ಬಂದು ಆಶೀರ್ವಾದ ಪಡೆಯುತ್ತಾರೆ. ದುಡ್ಡು ಕೊಟ್ಟು ಆಶೀರ್ವಾದ ಮಾಡುವುದು ನಮ್ಮ ಮಠದ ಪರಂಪರೆ. ಪೊಲೀಸರು ಭಕ್ತರಾಗಿ ಕಾಲಿಗೆ ನಮಸ್ಕಾರ‌ ಮಾಡಿದ್ದಾರೆ. ಅವರಿಗೆ ನಾವು ಲಂಚ ಕೊಟ್ಟಿಲ್ಲ. ನಾವು ದಿವಸದ ದಾಸೋಹಕ್ಕೆ ಎಷ್ಟು ಹಣ ಬೇಕು ಅಷ್ಟು ಇಟ್ಕೊಂಡು. ಉಳಿದ ಹಣವನ್ನು ನಾವು ಭಕ್ತರಿಗೆ ಕೊಡುತ್ತೇವೆ. ಇದು ಭಕ್ತರನ್ನು ಬೆಳೆಸುವ ಮಠವಾಗಿದೆ ಎಂದು ಹೇಳಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version