ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ: ಡಿ.ಕೆ. ಶಿವಕುಮಾರ್

Prasthutha|

ಬೆಂಗಳೂರು: ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿ ಏನಾದರೂ ಇದ್ದಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಮಾಡುತ್ತಿದ್ದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

- Advertisement -

ಕುಮಾರಪಾರ್ಕ್ ನಲ್ಲಿರುವ ತಮ್ಮ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಡಿಕೆ ಶಿವಕುಮಾರ್ ಹೀಗೆ ಪ್ರತಿಕ್ರಿಯಿಸಿದ್ದಾರೆ.

ಜೆಡಿಎಸ್ ಎಲ್ಲಿದೆ ಎಂದು ಕಾಂಗ್ರೆಸ್ ನಾಯಕರಿಗೆ ತೋರಿಸುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಯಾರಾದರೂ ತಮ್ಮದೇ ಪಕ್ಷ ಇಟ್ಟುಕೊಂಡು ತಮ್ಮ ಕುಟುಂಬದವರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸುತ್ತಾರಾ? ಎಂದು ಕೇಳಿದರು.

- Advertisement -

ಆ ಪಕ್ಷ ಇರಬೇಕು, ಪ್ರಬಲ ವಿರೋಧ ಪಕ್ಷವಾಗಬೇಕು ಎಂಬುದು ನಮ್ಮ ಆಸೆ. ಆದರೆ ಅವರೇ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಿಕೊಳ್ಳುತ್ತಿದ್ದಾರೆ. ದೇಶದ ಪ್ರಧಾನಿಯಾದವರು, ಎರಡು ಬಾರಿ ಮುಖ್ಯಮಂತ್ರಿಯಾದವರು ಇರುವ ಪಕ್ಷವನ್ನು ವಿಲೀನ ಮಾಡುತ್ತಿರುವುದನ್ನು ನೋಡಿ ಬೇಸರವಾಗುತ್ತಿದೆ ಎಂದು ಡಿಸಿಎಂ ಕುಟುಕಿದರು.

ಡಿ.ಕೆ ಸುರೇಶ್ ಪಕ್ಷದ ಬಾವುಟ ಬಿಟ್ಟು ಕನ್ನಡ ಬಾವುಟ ಇಟ್ಟುಕೊಂಡಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಮಗೆ ರಾಷ್ಟ್ರಧ್ವಜ, ಪಕ್ಷದ ಧ್ವಜ, ನಾಡ ಧ್ವಜದ ಮೇಲೆ ಗೌರವವಿದೆ. ನಮ್ಮ ನಾಡು, ಭೂಮಿ, ನಮಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ರಾಜ್ಯದ ಹಿತ ಕಾಯಲು ನಾವು ಕನ್ನಡಿಗರಿಗೆ ಕರೆ ನೀಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.

Join Whatsapp