Home ಟಾಪ್ ಸುದ್ದಿಗಳು ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ: ಮಾ.7 ರಂದು ಬಿಜೆಪಿ ಸೇರ್ಪಡೆ

ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ: ಮಾ.7 ರಂದು ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಗುರುವಾರ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.


ಸುದ್ದಿಗಾರರಿಗೆ ಮಂಗಳವಾರ ಈ ಮಾಹಿತಿ ನೀಡಿದ ಅವರು, ಪಶ್ಚಿಮ ಬಂಗಾಳದಲ್ಲಿರುವ ತೃಣಮೂಲ ಕಾಂಗ್ರೆಸ್ ನೇತೃತ್ವದ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಉದ್ದೇಶದಿಂದ ರಾಷ್ಟ್ರೀಯ ಪಕ್ಷ ಬಿಜೆಪಿ ಸೇರುತ್ತಿರುವುದಾಗಿ ಹೇಳಿದ್ದಾರೆ.


ಆಡಳಿತ ಪಕ್ಷದ ಲೇವಡಿಯಿಂದ ನಾನು ಈ ಕ್ರಮಕ್ಕೆ ಮುಂದಾಗಿದ್ದೇನೆ. ಅವರ ಅಪಹಾಸ್ಯ ಮತ್ತು ಹೇಳಿಕೆಗಳು ನನ್ನನ್ನು ಈ ಹೆಜ್ಜೆ ಇಡಲು ಪ್ರೇರೇಪಿಸಿತು. ಆಡಳಿತ ಪಕ್ಷ ನನ್ನನ್ನು ಹಲವು ಬಾರಿ ಅವಮಾನಿಸಿದೆ. ಅವರ ವಕ್ತಾರರು ನನ್ನ ಮೇಲೆ ಅಸಂಸದೀಯ ಪದಗಳಿಂದ ದಾಳಿ ನಡೆಸಿದ್ದಾರೆ. ಅವರಿಗೆ ಶಿಕ್ಷಣದ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

Join Whatsapp
Exit mobile version