Home ಟಾಪ್ ಸುದ್ದಿಗಳು ಸೂಫಿ ಸಂತರೆಂದೇ ಖ್ಯಾತರಾಗಿದ್ದ ಡಾ. ಸೈಯದ್ ಶಹಾ ವಿಧಿವಶ

ಸೂಫಿ ಸಂತರೆಂದೇ ಖ್ಯಾತರಾಗಿದ್ದ ಡಾ. ಸೈಯದ್ ಶಹಾ ವಿಧಿವಶ

ಕಲಬುರಗಿ: ಸೂಫಿ ಸಂತರೆಂದೇ ಖ್ಯಾತಿ ಪಡೆದಿದ್ದ ಕೆಬಿಎನ್ ದರ್ಗಾದ ಪೀಠಾಧಿಪತಿ ಡಾ.ಸೈಯದ್ ಶಹಾ ಖುಸ್ರೋ ಹುಸೇನಿ (79) ಅನಾರೋಗ್ಯದಿಂದ ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ.


ಸೈಯದ್ ಶಹಾ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ರಾತ್ರಿ ಕಲಬುರಗಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


2017ರಲ್ಲಿ ಡಾ.ಸೈಯದ್ ಶಾ ಅವರಿಗೆ ರಾಜ್ಯಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. 1972ರಿಂದಲೇ ಕೆಬಿಎನ್ ಶಿಕ್ಷಣ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಇವರು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಅಲ್ಲದೇ ಅನೇಕ ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದ್ದಾರೆ. ಕೆಬಿಎನ್ ದರ್ಗಾ ದೇಶದ ಎರಡನೇ ಅಜ್ಮೀರ್ ಎಂದೇ ಖ್ಯಾತಿ ಗಳಿಸಿದೆ.


ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಹಿರಿಯ ಧಾರ್ಮಿಕ ಮುಖಂಡರು, ಕಲಬುರಗಿಯ ಹಜ್ರತ್ ಖಾಜಾ ಬಂದೇನವಾಜ ದರ್ಗಾದ ಗುರುಗಳು ಆದ ಸಯ್ಯದ್ ಶಾ ಖುಸ್ರೊ ಹುಸೇನಿ ಅವರ ನಿಧನದ ಸುದ್ದಿ ನೋವುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.


ಬಂದೇನವಾಜ ದರ್ಗಾವನ್ನು ಹಿಂದೂ – ಮುಸ್ಲಿಂ ಸೌಹಾರ್ದತೆಯ ಕೊಂಡಿಯನ್ನಾಗಿಸಿ, ನಾಡಿನ ಭಾವೈಕ್ಯ ಪರಂಪರೆಯನ್ನು ಮುನ್ನಡೆಸಿಕೊಂಡು ಬಂದವರು. ಸದಾಕಾಲ ಸಮಾಜದ ಒಳಿತನ್ನೇ ಬಯಸುತ್ತಿದ್ದ ಸಯ್ಯದ್ ಶಾ ಖುಸ್ರೊ ಹುಸೇನಿ ಅವರ ಅಗಲಿಕೆಯಿಂದ ನೊಂದಿರುವ ಅವರ ಬಂಧು ಮಿತ್ರರಿಗೆ, ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

Join Whatsapp
Exit mobile version