Home ಟಾಪ್ ಸುದ್ದಿಗಳು ಹೆಡ್ ಬುಷ್ ವಿವಾದ: ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ, ಕಪ್ಪು ಮಸಿ ಬಳಿದ...

ಹೆಡ್ ಬುಷ್ ವಿವಾದ: ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ, ಕಪ್ಪು ಮಸಿ ಬಳಿದ ಸಂಘಪರಿವಾರ

ತುಮಕೂರು: ನಟ ಡಾಲಿ ಧನಂಜಯ್ ಅಭಿನಯ ಮತ್ತು ನಿರ್ಮಾಣದ ‘ಹೆಡ್ ಬುಶ್’ ಚಿತ್ರ ಈಗಾಗಲೇ ರಾಷ್ಟ್ರಾದ್ಯಂತ ಪ್ರದರ್ಶನಗೊಳ್ಳುತ್ತಿದ್ದು, ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ಈ ಸಿನಿಮಾದಲ್ಲಿ ವೀರಗಾಸೆ ಕುಣಿತಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ, ಕಪ್ಪು ಮಸಿ ಬಳಿದ ಘಟನೆ ತಿಪಟೂರು ನಗರದ ಲಕ್ಷ್ಮೀ ಚಿತ್ರಮಂದಿರದ ಆವರಣದಲ್ಲಿ ನಡೆದಿದೆ.


‘ಹೆಡ್ ಬುಶ್’ ಚಿತ್ರ ದಲ್ಲಿ ಹಿಂದೂ ಧರ್ಮಕ್ಕೆ ಅವಮಾನವಾಗಿದೆ, ಡಾಲಿ ಧನಂಜಯ ಕ್ಷಮೆ ಕೇಳಬೇಕು ಹಾಗೂ ಚಿತ್ರದಿಂದ ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂದು ಸಂಘಪರಿವಾರದ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇಲ್ಲದಿದ್ದರೇ ಯಾವ ಚಿತ್ರಮಂದಿರಗಳಲ್ಲೂ ಈ ಚಿತ್ರ ಪ್ರದರ್ಶನ ಮಾಡದಂತೆ ತಡೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

Join Whatsapp
Exit mobile version