ರಾಮನಗರ: ವಂಚನೆ ಕೇಸ್ವೊಂದನ್ನು ಖುಲಾಸೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಮಹೇಶ್ 50 ಸಾವಿರ ರೂ. ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಹಣ ಪಡೆಯುವಾಗ ಖಚಿತ ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಚೀಟಿಂಗ್ ಪ್ರಕರಣ ಖುಲಾಸೆ ಮಾಡಿಕೊಡುವುದಾಗಿ 2.5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಮಹೇಶ್, ಈಗಾಗಲೇ 75 ಸಾವಿರ ಲಂಚ ಪಡೆದಿದ್ದ. ಇಂದು 50 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಸದ್ಯ ಹೆಡ್ ಕಾನ್ಸ್ಟೇಬಲ್ ಮಹೇಶ್ ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.