ಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್‌ಸ್ಟೇಬಲ್ ಕುಸಿದು ಬಿದ್ದು ಸಾವು.!

Prasthutha|

ದೆಹಲಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

- Advertisement -

ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿರುವ ರವಿಕುಮಾರ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಆಗಿ ವರ್ಗಾವಣೆಯಾಗುತ್ತಿದ್ದಂತೆ ಬೀಳ್ಕೊಡುಗೆ ಪಾರ್ಟಿ ಆಯೋಜಿಸಿದ್ದರು.

ಈ ವೇಳೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಹೆಡ್ ಕಾನ್‌ಸ್ಟೆಬಲ್ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು ರವಿಕುಮಾರ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

- Advertisement -

ಸಾವಿಗೂ ಕೆಲ ನಿಮಿಷಗಳ ಮುಂಚೆ ಎಲ್ಲರೊಂದಿಗೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.



Join Whatsapp
Exit mobile version