ಕಾರುಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೆ ಇಬ್ಬರ ದುರ್ಮರಣ

Prasthutha|

ಹುಣಸೂರು: ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮೈಸೂರು ಹುಣಸೂರು ರಸ್ತೆಯಲ್ಲಿ ನಡೆದಿದೆ.

- Advertisement -

ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

ಮೃತಪಟ್ಟವರನ್ನು ಬೈಲುಕುಪ್ಪೆಯ ಹೋಟೆಲ್ ಉದ್ಯಮಿ ಮೋಹನ್ ಹಾಗೂ ಅವರ ಅಳಿಯ ಎಂದು ಗುರುತಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.



Join Whatsapp