Home ಟಾಪ್ ಸುದ್ದಿಗಳು ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಮೈಸೂರು:  ವಿದ್ಯಾರ್ಥಿನಿಯನ್ನು ಚುಂಬಿಸಿದ ಮುಖ್ಯೋಪಾಧ್ಯಾಯರ ವಿರುದ್ಧ ಶಿಕ್ಷಣ ಇಲಾಖೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದಾಖಲಿಸಿದೆ.

ಮೈಸೂರಿನ ಹೆಚ್ ಡಿ ಕೋಟೆ ಟೌನ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಕಿಟಕಿ ಮೂಲಕ ವೀಡಿಯೋವನ್ನು ಚಿತ್ರೀಕರಿಸಿದ್ದಾರೆ. ಮುಖ್ಯೋಪಾಧ್ಯಾಯರು ತಮ್ಮ ಚೇಂಬರ್ ನಲ್ಲಿ ವಿದ್ಯಾರ್ಥಿನಿಯನ್ನು ಚುಂಬಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದ್ದು, ಈ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದರು.

ದೂರಿನ ಅನ್ವಯ ಬಿಇಒ ಶಾಲಾ ವಿದ್ಯಾರ್ಥಿನಿಯ ಮೇಲೆ ಮುಖ್ಯೋಪಾಧ್ಯಾಯರ ಲೈಂಗಿಕ ದೌರ್ಜನ್ಯದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Join Whatsapp
Exit mobile version