ದ.ಕ. ಜಿಲ್ಲಾ ಪಂಚಾಯತ್ ವತಿಯಿಂದ SSLC ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಬಿರ

Prasthutha|

ಮಂಗಳೂರು : ಜಿಲ್ಲೆಯ 10ನೇ ತರಗತಿಯ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಎರಡು ದಿನಗಳ ವೈದ್ಯಕೀಯ ಶಿಬಿರವನ್ನು ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಸಲಾಗಿದೆ.

- Advertisement -

ಕೋವಿಡ್ 19 ಕಾರಣದಿಂದಾಗಿ ಈ ವಿದ್ಯಾರ್ಥಿಗಳಿಗೆ ಜಿಲ್ಲಾ ಆಸ್ಪತ್ರೆಯಿಂದ ಪರೀಕ್ಷೆಗೊಳಗಾಗಿ ವೈದ್ಯಕೀಯ ಪ್ರಮಾಣ ಪತ್ರ ಸಕಾಲದಲ್ಲಿ ಪಡೆಯಲು ಸಾಧ್ಯವಾಗಿರಲಿಲ್ಲ. ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿವಿಧ ವಿನಾಯತಿ/ಸೌಲಭ್ಯಗಳನ್ನು ಪಡೆಯಲು ಅವಕಾಶವಿದೆ.

ಜಿಲ್ಲಾ ವೈದ್ಯಾಧಿಕಾರಿಗಳಿಂದ ವೈದ್ಯಕೀಯ ಪ್ರಮಾಣ ಪತ್ರ ಪಡೆಯಲು ಕಷ್ಟವಾಗಿದ್ದುದರಿಂದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮುತುವರ್ಜಿಯಿಂದ ಜಿಲ್ಲಾ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಜಿಲ್ಲಾ ವೆನ್ ಲಾಕ್ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು.

- Advertisement -

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಇಬ್ಬರು ಮನೋಶಾಸ್ತ್ರಜ್ಞರು, ಇಬ್ಬರು ನೇತ್ರ ತಜ್ಞರು, ಒಬ್ಬರು ಕಿವಿ ಮೂಗು, ಗಂಟಲು ತಜ್ಞರು, ಒಬ್ಬರು ಮಕ್ಕಳ ತಜ್ಞರು, ಒಬ್ಬರು ಮೂಳೆ ತಜ್ಞರು ಸೇರಿದಂತೆ ಒಟ್ಟು 11 ಮಂದಿ ವೈದ್ಯರ ತಂಡ ಶಿಬಿರದಲ್ಲಿ ಭಾಗವಹಿಸಿತ್ತು.

ಬಂಟ್ವಾಳದಿಂದ 44, ಬೆಳ್ತಂಗಡಿಯಿಂದ 22, ಮಂಗಳೂರು ಉತ್ತರದಿಂದ 123, ಮಂಗಳೂರು ದಕ್ಷಿಣದಿಂದ 111, ಮೂಡುಬಿದಿರೆಯಿಂದ 18, ಪುತ್ತೂರುನಿಂದ 47, ಸುಳ್ಯದಿಂದ 9 ವಿಶೇಷ ಚೇತನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದರು.   



Join Whatsapp