ಹೊಸದಿಲ್ಲಿ : ಭಾರತದಲ್ಲಿ ಕೊರೋನಾ ಸೋಂಕಿನ ತೀವ್ರ ಹೆಚ್ಚಳವಾಗುತ್ತಿದ್ದು, ದೇಶದ ಜನತೆ ಕಂಗಾಲಾಗಿದ್ದಾರೆ. ದೇಶದಲ್ಲಿ ಪ್ರತಿ ನಿಮಿಷಕ್ಕೆ ಸರಾಸರಿ ಇಬ್ಬರು ಕೊರೊನಾ ಸೋಂಕಿತರು ಬಲಿಯಾಗುತ್ತಿದ್ದು, 270 ಹೊಸ ಪ್ರಕರಣಗಳು ದಾಖಲಾಗುತ್ತಿವೆ ಎಂದು ವರದಿಯಾಗಿದೆ.
ಭಾರತದಲ್ಲಿ ಪ್ರತಿ ನಿಮಿಷಕ್ಕೆ ಸರಾಸರಿ ಇಬ್ಬರು ಕೊರೋನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. 270 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಅಂದರೆ ಪ್ರತಿ ಸೆಕೆಂಡ್ ಗೆ 4 ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಭಾರತದಲ್ಲಿ ದಾಖಲಾಗುತ್ತಿವೆ. ಭಾರತದಲ್ಲಿ ಈಗ 31 ಲಕ್ಷದ 70 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 1.87 ಕೋಟಿ ತಲುಪಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 2,97,698 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.