ಆರೋಗ್ಯ ಸಿಬ್ಬಂದಿ ಮೇಲೆ ದಾಳಿ ನಡೆದ 6 ಗಂಟೆಯೊಳಗೆ FIR ದಾಖಲಿಸಿ: ಕೇಂದ್ರ ಆರೋಗ್ಯ ಸಚಿವಾಲಯ

Prasthutha|


ನವದೆಹಲಿ: ಕರ್ತವ್ಯನಿರತ ಆರೋಗ್ಯ ಕಾರ್ಯಕರ್ತರ ಮೇಲೆ ಹಿಂಸಾಚಾರ ನಡೆದ 6 ಗಂಟೆಯೊಳಗೆ ಎಫ್ಐಆರ್ ದಾಖಲಿಸುವುದು ಸಂಸ್ಥೆಯ ಮುಖ್ಯಸ್ಥರ ಜವಾಬ್ದಾರಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ.
ಕೋಲ್ಕತ್ತದ ವೈದ್ಯ ವಿದ್ಯಾರ್ಥಿಯ ಕೊಲೆ ಪ್ರಕರಣ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿರುವಾಗಲೇ ಕೇಂದ್ರ ಸರ್ಕಾರದಿಂದ ಈ ಆದೇಶ ಬಂದಿದೆ.

- Advertisement -

ಏಮ್ಸ್ ನಿರ್ದೇಶಕರಿಗೆ, ಕೇಂದ್ರ ಸರ್ಕಾರದ ಆಸ್ಪತ್ರೆಗಳ ಮುಖ್ಯಸ್ಥರಿಗೆ, ದೇಶದಾದ್ಯಂತ ಇರುವ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಿಗೆ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ. ಅತುಲ್ ಗೋಯಲ್ ಅವರ ಕಚೇರಿಯು ಈ ಬಗ್ಗೆ ಟಿಪ್ಪಣಿ ಕಳುಹಿಸಿದೆ.


‘ಕರ್ತವ್ಯದಲ್ಲಿರುವ ಯಾವುದೇ ಆರೋಗ್ಯ ಸೇವಾ ಸಿಬ್ಬಂದಿ ಮೇಲೆ ಹಿಂಸಾಚಾರ ನಡೆದರೆ, ಘಟನೆ ಜರುಗಿದ ಗರಿಷ್ಠ ಆರು ಗಂಟೆಯೊಳಗೆ ಎಫ್ಐಆರ್ ದಾಖಲಿಸುವುದು ಸಂಸ್ಥೆಯ ಮುಖ್ಯಸ್ಥರ ಜವಾಬ್ದಾರಿ’ ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.



Join Whatsapp