ಆರೋಗ್ಯ ಸಚಿವರಿಗೂ ಕೋವಿಡ್ ಪಾಸಿಟಿವ್

Prasthutha|

ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

- Advertisement -

ಕಳೆದ ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಇದೀಗ ಅವರ ಪುತ್ರಿ ಪ್ರಿಯಾಂಕಾ ಗಾಂಧಿಗೂ ಸೋಂಕು ಇರುವುದು ದೃಢಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಖುದ್ದಾಗಿ ಟ್ವೀಟ್ ಮಾಡಿ, ಮಾಹಿತಿ ಹಂಚಿಕೊಂಡಿದ್ದಾರೆ.

Join Whatsapp