ಬೆಂಗಳೂರು: ಇಡಿ ವಿಚಾರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್, ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಲು ಕಾಂಗ್ರೆಸ್ ಪ್ರತಿಭಟನೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಸಲು ಕಾಂಗ್ರೆಸ್’ಗೆ ಅವಕಾಶವಿಲ್ಲ, ಬೇಕಿದ್ದರೆ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಲಿ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾದರೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಹೊರಬೇಕು, ಇವರ ನಡೆ ನಾಚಿಕೆ ತರಿಸುವಂತಿದೆ, ಒಂದೆಡೆ ಸಂವಿಧಾನದ ಬಗ್ಗೆ ಭಾಷಣ ಬಿಗಿಯುತ್ತಾರೆ, ಇನ್ನೊಂದೆಡೆ ಸಂವಿಧಾನಕ್ಕೆ ಅಗೌರವ ತೋರುತ್ತಿದ್ದಾರೆ ಎಂದು ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆಯೂ ನರಸಿಂಹರಾವ್, ಸೀತಾರಾಮ್ ಕೇಸರಿ ವಿರುದ್ಧವ ವಿಚಾರಣೆ ನಡೆದಿತ್ತು, ಕಾಂಗ್ರೆಸ್ ನಾಯಕ ಖರ್ಗೆ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ಆಗ ಸುಮ್ಮನಿದ್ದವರು ಈಗ ಯಾಕೆ ಹೋರಾಟ ಮಾಡುತ್ತಿದ್ದಾರೆ ಎಂದು ಸಚಿವ ಸುಧಾಕರ್ ಪ್ರಶ್ನಿಸಿದ್ದಾರೆ.