Home ಟಾಪ್ ಸುದ್ದಿಗಳು ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಲ್ಲಿ ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ: ಕೇಂದ್ರ ಎಚ್ಚರಿಕೆ

ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಲ್ಲಿ ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ: ಕೇಂದ್ರ ಎಚ್ಚರಿಕೆ

ನವದೆಹಲಿ: ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಲ್ಲಿ ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, 159 ದೇಶಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ಭಾರೀ ಹೆಚ್ಚಳವಾಗಿದೆ. ಯುರೋಪ್ ನ ಎಂಟು ದೇಶಗಳಲ್ಲಿ ಕಳೆದ ಎರಡು ವಾರಕ್ಕಿಂತಲೂ ಎರಡು ಪಟ್ಟು ಅಧಿಕ ಪ್ರಕರಣ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ ಎಂದಿದ್ದಾರೆ.

ಜಾಗತಿಕವಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಜನವರಿ 10ರಿಂದ ಏರಿಕೆಯಾಗತೊಡಗಿದ್ದು, ವಿಶ್ವಾದ್ಯಂತ ಒಂದೇ ದಿನದಲ್ಲಿ 31.59 ಲಕ್ಷ ಕೋವಿಡ್ ಪ್ರಕರಣ ವರದಿಯಾಗಿರುವುದಾಗಿ ಅವರು ತಿಳಿಸಿದ್ದಾರೆ.

ಭಾರತದಲ್ಲಿಯೂ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವುದರ ಕುರಿತು ಕಳವಳ ವ್ಯಕ್ತಪಡಿಸಿದ ಅಗರ್ವಾಲ್, ಜನವರಿ 12ರಂದು ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 9,55,319ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

Join Whatsapp
Exit mobile version