ಪ್ರಧಾನಿ ಮೋದಿ ಭದ್ರತಾ ಲೋಪ ಆರೋಪ: ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ

Prasthutha|

ನವದೆಹಲಿ: ಪ್ರಧಾನಿ ಮೋದಿ  ‘ಭದ್ರತಾ ಲೋಪ’ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ.

- Advertisement -

‘ಲಾಯರ್ಸ್ ವಾಯ್ಸ್’ ಎಂಬ ಸಂಘಟನೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ. ಪ್ರಧಾನಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಕೈಗೊಂಡ ಭದ್ರತಾ ಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ ಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿತ್ತು. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಪ್ರತ್ಯೇಕವಾಗಿ ರಚಿಸಿರುವ ವಿಚಾರಣಾ ಸಮಿತಿಗಳಿಗೆ ಮುಂದಿನ ವಿಚಾರಣೆವರೆಗೆ ತನಿಖೆ ಮುಂದುವರಿಸದಂತೆ ಸೂಚನೆ ನೀಡಿತ್ತು.



Join Whatsapp