ಇಂದು ಸುಪ್ರೀಂ ಕೋರ್ಟಿನಲ್ಲಿ NEET-UG 2024 ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ

Prasthutha|

ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ ಈ ವಿಚಾರಣೆ ನಡೆಸಲಿದೆ.

- Advertisement -

67 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಮೊದಲ ರ‌್ಯಾಂಕ್ ಹಂಚಿಕೊಳ್ಳಲು ಕಾರಣವಾದ ಹಗರಣ ಆರೋಪಗಳ ನಡುವೆ ಈ ವಿಷಯವು ಹೈಲೈಟ್ ಆಗಿದೆ.

NEET-UG ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ 1,500 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈಗಾಗಲೇ ಪ್ರಕಟಿಸಿದೆ.

Join Whatsapp