ಪಾಠ ಕೇಳುತ್ತಿರುವಾಗಲೇ ಹೃದಯಾಘಾತ: ವಿದ್ಯಾರ್ಥಿ ಮೃತ್ಯು

Prasthutha|

ಮಧ್ಯಪ್ರದೇಶ: ವಿದ್ಯಾರ್ಥಿಯೊಬ್ಬ ಬೆಳಗ್ಗೆ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ನಿವಾಸಿ ರಾಜಾ (18) ಮೃತ ವಿದ್ಯಾರ್ಥಿ. ಉನ್ನತ ವ್ಯಾಸಂಗಕ್ಕಾಗಿ ಇಂದೋರ್‌ನಲ್ಲಿ ನೆಲೆಸಿದ್ದನು.

- Advertisement -

ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗಳಿಗೆ ಅದೇ ಜಿಲ್ಲೆಯ ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ ಸೇರಿದ್ದ ರಾಜಾ ಪ್ರತಿದಿನದಂತೆ ಇಂದು ಬೆಳಗ್ಗೆಯೂ ಕೋಚಿಂಗ್ ಸೆಂಟರ್​​ಗೆ ಬಂದು ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದನು. ಅದೇ ಸಮಯ ಎದೆಯಲ್ಲಿ ನೋವಿನಿಂದ ನರಳುತ್ತಾ ಕುಳಿತಲ್ಲೇ ಕುಸಿದು ಬಿದ್ದಿದ್ದಾನೆ. ಗಮನಿಸಿದ ಸಹ ವಿದ್ಯಾರ್ಥಿಗಳು ಎತ್ತಿ ಬೆಂಚಿನ ಮೇಲೆ ಕೂರಿಸುವಾಗ ಅದಾಗಲೇ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದನು.

ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ವೈದ್ಯರು ಈಗಾಗಲೇ ಸಾವನ್ನಪ್ಪಿದ್ದಾನೆ ಎಂದು ದೃಢಪಡಿಸಿದ್ದಾರೆ. ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿಯಲ್ಲಿ ಇಡೀ ಘಟನೆ ದಾಖಲಾಗಿದ್ದು, ಲಿಂಕ್ ಕೆಳಗೆ ನೀಡಲಾಗಿದೆ.

Join Whatsapp