ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಹಾಸನದಲ್ಲಿ 11 ವರ್ಷದ ಬಾಲಕ ನಿಧನ

Prasthutha|

- Advertisement -

ಹಾಸನ: 11 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಸಚಿನ್ ಎಂದು ಗುರುತಿಸಲಾಗಿದೆ.

- Advertisement -

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಶುಕ್ರವಾರ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿರುವರಿಂದ ಶಾಲೆಗೆ ಹೋಗದೇ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದ. ಅದೇ ವೇಳೆ ಏಕಾಏಕಿ ಮತ್ತೇ ನೋವು ಕಾಣಿಸಿಕೊಂಡಿದೆ. ಇದ್ದ ಜಾಗದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾನೆ.

ರಾಯಚೂರಿನಲ್ಲೂ ಕೂಡ 14 ವರ್ಷದ ಬಾಲಕ ಕಡಿಮೆ ರಕ್ತದೊತ್ತಡದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅತ್ತನೂರು ಗ್ರಾಮದ ತರುಣ್ ಅತ್ತನೂರು ಎಂದು ಗುರುತಿಸಲಾಗಿದೆ. ತರಗತಿ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದು, ತಕ್ಷಣವೇ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಸಾವನ್ನಪ್ಪಿದ್ದಾನೆ.

ಯಾದಗಿರಿಯಲ್ಲೂ ಪರೀಕ್ಷೆ ಬರೆಯುತ್ತಿರುವಾಗ 16 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ಕರ್ಕಳ್ಳಿ ತಾಂಡಾದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಚೇತನಕುಮಾರ್ ರಾಠೋಡ್ ಎಂದು ಗುರುತಿಸಲಾಗಿದೆ. ಶಹಾಪೂರ ನಗರದ ಖಾಸಗಿ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.



Join Whatsapp