ತಿರುವನಂತಪುರ: ಕೇರಳದಲ್ಲಿ ಬಿಸಿಗಾಳಿಯ ಸ್ಥಿತಿ ಮುಂದುವರಿದಿದ್ದು ಮೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ತಿರುವನಂತಪುರ, ಆಲಪ್ಪುಳ ಮತ್ತು ಕೊಯಿಕ್ಕೋಡ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇರುವ ಕಾರಣ ನಾಳೆಯವರೆಗೆ (ಮೇ.9) ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ, ಎರ್ನಾಕುಲಂ, ತ್ರಿಶೂರ್, ಕಣ್ಣೂರು, ಕಾಸರಗೋಡಿನಲ್ಲಿ ಮೇ 10ರವರೆಗೂ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ.