ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

Prasthutha|

ಮಂಗಳೂರು: ದ.ಕ. ಜಿಲ್ಲೆ‌ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಹೇಳಿದೆ.

- Advertisement -

ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ ಮಾಡಿದೆ.

ಬಿಸಿಗಾಳಿಯಿಂದಾಗಿ ಉಂಟಾಗುವ ಸನ್ ಸ್ಟೋಕ್ ಮತ್ತಿತರ ಸಮಸ್ಯೆಗಳಿಂದ ಪಾರಾಗಲು ಮಧ್ಯಾಹ್ನ 1 ರಿಂದ ಅಪರಾಹ್ನ 3 ರವರೆಗೆ ಹೊರಗೆ ಹೋಗಬಾರದು, ತೆಳುವಾದ, ಹಗುರವಾದ ಬಟ್ಟೆಗಳನ್ನು ಧರಿಸಬೇಕು,ಹಗುರವಾದ ಬಟ್ಟೆಗಳನ್ನು ಧರಿಸಬೇಕು, ನಿರ್ಜಲೀಕರಣವಾಗದಂತೆ ತಡೆಯಲು ಆಗಾಗ ನೀರು ಕುಡಿಯುತ್ತಿರಬೇಕು ಎಂದು ಸೂಚನೆ ನೀಡಿದೆ.

Join Whatsapp