Home ಟಾಪ್ ಸುದ್ದಿಗಳು ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

ಮಂಗಳೂರು: ದ.ಕ. ಜಿಲ್ಲೆ‌ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಹೇಳಿದೆ.

ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ ಮಾಡಿದೆ.

ಬಿಸಿಗಾಳಿಯಿಂದಾಗಿ ಉಂಟಾಗುವ ಸನ್ ಸ್ಟೋಕ್ ಮತ್ತಿತರ ಸಮಸ್ಯೆಗಳಿಂದ ಪಾರಾಗಲು ಮಧ್ಯಾಹ್ನ 1 ರಿಂದ ಅಪರಾಹ್ನ 3 ರವರೆಗೆ ಹೊರಗೆ ಹೋಗಬಾರದು, ತೆಳುವಾದ, ಹಗುರವಾದ ಬಟ್ಟೆಗಳನ್ನು ಧರಿಸಬೇಕು,ಹಗುರವಾದ ಬಟ್ಟೆಗಳನ್ನು ಧರಿಸಬೇಕು, ನಿರ್ಜಲೀಕರಣವಾಗದಂತೆ ತಡೆಯಲು ಆಗಾಗ ನೀರು ಕುಡಿಯುತ್ತಿರಬೇಕು ಎಂದು ಸೂಚನೆ ನೀಡಿದೆ.

Join Whatsapp
Exit mobile version