ದೇಶದ ಹಲವೆಡೆ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಿನಲ್ಲಿ ಬಿಸಿಲ ಬೇಗೆ ತೀವ್ರಗೊಳ್ಳಲಿದೆ: ಹವಾಮಾನ ಇಲಾಖೆ

Prasthutha|

ಬೆಂಗಳೂರು: ದೇಶದ ಹಲವೆಡೆ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಿನಲ್ಲಿ ಬಿಸಿಲ ಬೇಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ ಮರುದಿನವೇ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆ. ದಾಟಿದೆ.

- Advertisement -

ಮಂಗಳವಾರ ಮಧ್ಯಾಹ್ನ ಸುಡು ಬಿಸಿಲಿನ ವಾತಾವರಣ ಇದ್ದ ಕಾರಣ ರಸ್ತೆಗಳಲ್ಲಿ ವಾಹನ ಸಂಚಾರ ತುಸು ಕಡಿಮೆಯಿತ್ತು. ಆದರೂ, ಕೆಲವೆಡೆ ಮಾರುಕಟ್ಟೆ ಹಾಗೂ ಮನರಂಜನಾ ತಾಣಗಳಲ್ಲಿ ಜನಸಂದಣಿ ಕಂಡಿತು. ಸದ್ಯ ಶಾಲಾ ವಿದ್ಯಾರ್ಥಿಗಳ ಪರೀಕ್ಷೆ ಮುಗಿದಿರುವ ಕಾರಣ ಅವರೆಲ್ಲರೂ ಮನೆಯಲ್ಲೇ ಇರುವಂತಾಗಿದೆ. ಮುಂದಿನ ದಿನಗಳಲ್ಲಿ ಜನರು ಬಿಸಿಲಿನಲ್ಲಿ ಅನಗತ್ಯವಾಗಿ ಓಡಾಟ ಮಾಡದಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ರಾಜ್ಯದ ಹಲವೆಡೆ ಎ.2 ರಿಂದ 14 ದಿನಗಳ ಕಾಲ ಬಿಸಿಗಾಳಿ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಾದ ಚಿತ್ರದುರ್ಗ ಗದಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆ ಗಳಲ್ಲಿ ಬಿಸಿಗಾಳಿ ಕಾಣಿಸಿಕೊಳ್ಳಲಿದೆ ಎಂದೂ ತಿಳಿಸಲಾಗಿದೆ.



Join Whatsapp