ಮುಂಬೈನಲ್ಲಿ ಭಾರೀ ಅಗ್ನಿ ದುರಂತ: 7 ಸಾವು, ಕನಿಷ್ಠ 15 ಮಂದಿಗೆ ಗಾಯ

Prasthutha|

ಮುಂಬೈ: ಇಂದು ಮುಂಜಾನೆ ಮಧ್ಯ ಮುಂಬೈನ ತಾರ್ಡಿಯೊ ಪ್ರದೇಶದ ಗೋವಾಲಿಯಾ ಟ್ಯಾಂಕ್ ನಲ್ಲಿರುವ ವಸತಿ ಕಟ್ಟಡದ 18 ನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 7 ಮಂದಿ ಬಲಿಯಾಗಿದ್ದು, ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

- Advertisement -

ಇದು ಗ್ರೌಂಡ್ ಪ್ಲಸ್ 20 ಅಂತಸ್ತಿನ ಕಟ್ಟಡವಾಗಿದ್ದು ಅದರ 18 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಹದಿಮೂರು ಅಗ್ನಿಶಾಮಕ ವಾಹನಗಳು, ಏಳು ವಾಟರ್ ಜೆಟ್ಟಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿ ತಿಳಿಸಿದ್ದಾರೆ.

ಬೆಂಕಿಯಲ್ಲಿ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಹತ್ತಿರದ ಭಾಟಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

- Advertisement -

ಪ್ರಸ್ತುತ ಲಭ್ಯವಾಗಿರುವ ಮಾಹಿತಿ ಪ್ರಕಾರ ಗಾಯಾಳುಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ನಾಯರ್ ಆಸ್ಪತ್ರೆಯ ವೈದ್ಯರು ಘೋಷಿಸಿದ್ದಾರೆ. ಗಾಯಗೊಂಡವರಲ್ಲಿ ಮೂವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ



Join Whatsapp