Home ಟಾಪ್ ಸುದ್ದಿಗಳು ಭಾರೀ ಪ್ರವಾಹ: ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್ !

ಭಾರೀ ಪ್ರವಾಹ: ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್ !

ನವದೆಹಲಿ: ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಲು ಹೋಗುತ್ತಿದ್ದ ವೇಳೆ ಶಾಲಾ ಬಸ್ ನೀರಿನಲ್ಲಿ ಕೊಚ್ಚಿಹೋದ ಘಟನೆ ಉತ್ತರಾಖಂಡದ ಚಂಪಾವತ್ ನಲ್ಲಿ ನಡೆದಿದೆ.

ಘಟನೆಯಲ್ಲಿ ಶಾಲಾ ಬಸ್ ಚಾಲಕ ಕಮಲೇಶ್ ಕರ್ಕಿ ಹಾಗೂ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಅದೃಷ್ಟವಶಾತ್ ಬಸ್ ನಲ್ಲಿ ಮಕ್ಕಳಿರಲಿಲ್ಲ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ನೀರಿನ ಹರಿವು ಹೆಚ್ಚಿರುವುದರಿಂದ ಶಾಲಾ ಬಸ್ ಚಾಲಕನಿಗೆ ಸ್ವಲ್ಪ ಸಮಯ ಕಾಯಲು ಹೇಳಲಾಗಿತ್ತು. ಆದರೂ ಆತ ತುಂಬಿ ಹರಿಯುತ್ತಿದ್ದ ನದಿಯ ರಸ್ತೆಯಲ್ಲಿ ಬಸ್ ಚಲಾಯಿಸಿದ್ದ. ಈ ವೇಳೆ ನೀರಿನ ರಭಸಕ್ಕೆ ಬಸ್ ಮಗುಚಿ ಬಿದ್ದಿದ್ದು, ನದಿಯಲ್ಲಿ ಸ್ವಲ್ಪ ದೂರ ಕೊಚ್ಚಿಕೊಂಡು ಹೋಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.


ಶಾಲಾ ಬಸ್ ಅನ್ನು ಜೆಸಿಬಿ ಸಹಾಯದಿಂದ ನದಿಯಿಂದ ಹೊರತೆಗೆಯಲಾಗಿದ್ದು, ನದಿ ತುಂಬಿ ಹರಿಯುತ್ತಿರುವುದರಿಂದ ಪೂರ್ಣಗಿರಿ ರಸ್ತೆಯ ಸಂಚಾರವನ್ನು ಸದ್ಯಕ್ಕೆ ಬಂದ್ ಮಾಡಲಾಗಿದೆ.

Join Whatsapp
Exit mobile version